ಶಿವಮೊಗ್ಗ: ಡೆತ್ ನೋಟ್ ಕಳುಹಿಸಿ ಹೆಡ್ ಕಾನ್‌ಸ್ಟೇಬಲ್ ಠಾಣೆಯಲ್ಲಿಯೇ ಆತ್ಮಹತ್ಯೆ
ಶಿವಮೊಗ್ಗ: ವಾಟ್ಸಪ್ ನಲ್ಲಿ ಡೆತ್ ನೋಟ್ ಕಳುಹಿಸಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತರನ್ನು ಹೆಡ್ ಕಾನ್‌ಸ್ಟೇಬಲ್ ಮುಹಮ್ಮದ್ ಝಕ್ರಿಯಾ (55) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಪಶ್ಚಿಮ ಸಂಚಾರ ಠಾಣೆಯ ಹಿಂಬದಿ ಸೆಲ್‌ಗಳಿರುವ ಪ್ರದೇಶದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.




