ವಿಟ್ಲ: ಠಾಣಾ ವ್ಯಾಪ್ತಿಯಲ್ಲಿ ಗೋವು ಕಳ್ಳತನ ಪ್ರಕರಣ: ಆರೋಪಿ ಬಂಧನ
ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ರಾತ್ರಿ ಹೊತ್ತು ಹಾಯಾಗಿ ನಿದ್ರಿಸಿದ್ದ ನಾಲ್ಕು ಗೋವುಗಳನ್ನು ಗೇಟ್ ಮುರಿದು18-11-2025 ರಂದು ಕಳ್ಳತನ ನಡೆಸಲಾಗಿತ್ತು.
ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 04 ದನಗಳು ಕಳ್ಳತನವಾಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸುತ್ತಿದ್ದ ವಿಟ್ಲ ಪೊಲೀಸರು ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಉಳ್ಳಾಲ ತಾಲೂಕು ಕೋಡಿ ನಿವಾಸಿ ಝುಲ್ಫಾನ್ ಮಾಲಿಕ್ ಉಳ್ಳಾಲ್(30) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟ್ ಡಿಗೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿಯವರು ಮಾಹಿತಿ ನೀಡಿದ್ದಾರೆ.




