January 31, 2026

ಉಡುಪಿ: ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಸಾವು

0
image_editor_output_image279098473-1768045141616.jpg

ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ಜ.9ರ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ (36) ಮೃತ ದುರ್ದೈವಿ.

ಪ್ರವೀಣ್ ತನ್ನ ಬೈಕ್ ನಲ್ಲಿ ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಕಳೆದ ಒಂದವರೇ ವರ್ಷದ ಹಿಂದೆಯಷ್ಟೇ ಯುವತಿಯೊರ್ವಳನ್ನು ಪ್ರೀತಿಸಿ ಮದುವೆ ಆಗಿದ್ದರು. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!