ಇನ್ನೋವಾ ಕಾರಿಗೆ ಲಾರಿ ಢಿಕ್ಕಿ: ಬಂಟ್ವಾಳದ ಶಬರಿಮಲೆ ವೃತಧಾರಿ ಬಾಲಕ ಸಾವು
ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.
ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ.
ಇನ್ನೋವಾ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಒಟ್ಟು 7 ಮಂದಿ ಅಯ್ಯಪ್ಪ ಮಾಲಾಧಾರಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ವರದರಾಜ್ ಎಂಬವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.




