ಮಂಗಳೂರು ಮೂಲದ ಯುವತಿ ಸಾವು ಪ್ರಕರಣ: ಪಿಯುಸಿ ವಿದ್ಯಾರ್ಥಿಯ ಬಂಧನ
ಬೆಂಗಳೂರು: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡದಿಂದ ಸಾವನಪ್ಪಿದ ಮಂಗಳೂರು ಮೂಲದ ಯುವತಿ ಸಾವಿನ ಪ್ರಕರಣದಲ್ಲಿ ಬಿಗ್ ಟ್ಲಿಸ್ಟ್ ಸಿಕ್ಕಿದ್ದು, ಬೆಂಕಿ ಅವಘಡದಿಂದ ಆಕೆ ಸಾವನಪ್ಪಿಲ್ಲ, ಬದಲಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಒರ್ವನನ್ನು ಅರೆಸ್ಟ್ ಮಾಡಿದ್ದಾರೆ.
ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೇರಳ ಮೂಲದ ಕರ್ನಲ್ ಕುರೈ (18) ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ತೆರೆದ ಕಿಟಕಿ, ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ. ಆಕೆಯ ಮೊಬೈಲ್ ನಾಪತ್ತೆಯಾಗಿದ್ದು ಪೊಲೀಸರು ಈ ಕೊಲೆ ಪ್ರಕರಣವನ್ನು ಭೇದಿಸಲು ಕಾರಣವಾಯಿತು.
ಮೃತ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಶರ್ಮಿಳಾ ಬೆಂಗಳೂರಿನ ಸುಬ್ರಮಣ್ಯ ಲೇಔಟ್ನಲ್ಲಿ ವಾಸವಿದ್ದರು. ಮಂಗಳೂರನಿಂದ ಎರಡು ವರ್ಷದ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದರು.




