ಮಂಗಳೂರು: ಬೆಂಕಿ ತಗುಲಿ ಪಾಂಡೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಸಾವು
ಮಂಗಳೂರು: ಬೆಂಕಿ ತಗುಲಿ ಸುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ(57)ಚಿಕಿತ್ಸೆ ಫಲಕಾರಿಯಾಗದೆ ರವಿವಾರ(ಜ.11) ಮೃತಪಟ್ಟಿದ್ದಾರೆ.
ಡಿಸೆಂಬರ್ 28 ರಂದು ಮಂಗಳೂರಿನ ಕೆಪಿಟಿ ಬಳಿಯ ವ್ಯಾಸನಗರದ ಮನೆಯಲ್ಲಿ ತರಗೆಲೆಯನ್ನು ಸುಡುವ ವೇಳೆ ಅವರಿಗೆ ಬೆಂಕಿ ತಗುಲಿತ್ತು. ಪರಿಣಾಮ ತೀವ್ರ ಗಾಯಗೊಂಡಿದ್ದ ಅವರು ಸುಮಾರು ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರವಿವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.




