February 1, 2026

ಕಡಬ: ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ಚಿರತೆ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

0
image_editor_output_image-1256700541-1768207537867.jpg

ಕಡಬ: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7 ರಂದು ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ.

ಜ.7 ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ ಹೊತ್ತಿಗೆ ಮನೆಯಂಗಳಕ್ಕೆ ಲಗ್ಗೆ ಇಟ್ಟಿದೆ. ಸುಮಾರು ಒಂದು ಗಂಟೆಗಳ ಕಾಲ ಮನೆಯ ಸುತ್ತಮುತ್ತಲೇ ಹೊಂಚು ಹಾಕಿದ ಚಿರತೆ, ಅಂತಿಮವಾಗಿ ಸಾಕು ನಾಯಿಯನ್ನು ಕಚ್ಚಿಕೊಂಡು ಪರಾರಿಯಾಗಿದೆ. ಈ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಕಳೆದ ಕೆಲ ದಿನಗಳಿಂದ ಈ ಪರಿಸರದಲ್ಲಿ ಸುಮಾರು ನಾಲ್ಕು ಮನೆಗಳ ಸಾಕು ನಾಯಿಗಳು ನಿಗೂಢವಾಗಿ ನಾಪತ್ತೆಯಾಗಿದ್ದವು. ಆದರೆ ಆ ಮನೆಗಳಲ್ಲಿ ಸಿಸಿಟಿವಿ ಇಲ್ಲದ ಕಾರಣ ಚಿರತೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಇದೀಗ ಸುಮ ನೂಜಿಲ ಅವರ ಮನೆಯ ದೃಶ್ಯಾವಳಿಗಳಿಂದಾಗಿ, ಈ ಭಾಗದಲ್ಲಿ ಚಿರತೆ ಬೀಡು ಬಿಟ್ಟಿರುವುದು ಖಚಿತವಾಗಿದ್ದು, ಈ ಹಿಂದಿನ ನಾಯಿಗಳ ನಾಪತ್ತೆಗೂ ಇದೇ ಚಿರತೆ ಕಾರಣವೆಂಬ ಶಮಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!