ಕೌಟುಂಬಿಕ ಕಲಹ: 10 ತಿಂಗಳ ಮಗನಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ
ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಸುಷ್ಮಾ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಶಾಪಿಂಗ್‌ಗಾಗಿ ತನ್ನ ತಾಯಿ ಲಲಿತಾ (44) ಅವರ ಮನೆಗೆ ಹೋಗಿದ್ದರು. ಈ ವೇಳೆ ತನ್ನ ಮಗುವಿನೊಂದಿಗೆ ಮತ್ತೊಂದು ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.




