ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಇದೀಗ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಉಲ್ಲಂಘಿಸಿದ್ದು, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.
‘ಈ ಹಿನ್ನೆಲೆಯಲ್ಲಿ ರಾಕೇಶ್ ಶೆಟ್ಟಿ ಅವರು ಮೂರು ತಿಂಗಳು ಜೈಲು ವಾಸ ಅನುಭವಿಸಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.




