March 18, 2026

ಬೆಳ್ತಂಗಡಿ: ದೇವಸ್ಥಾನಕ್ಕೆ ಪೂಜೆಗೆ ಹೊರಟಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ

0
image_editor_output_image569596919-1768381815073.jpg

ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಪೂಜೆಗೆ ಹೊರಟಿದ್ದ ಬಾಲಕನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಕುವೆಟ್ಟು ಪಂಚಾಯತ್ ಓಡಿಲ್ನಾಳ ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ನಡೆದಿದೆ.

ಮೃತ ಬಾಲಕನ್ನು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸುಮಂತ್ (16) ಎಂದು ಗುರುತಿಸಲಾಗಿದೆ.

ಸುಮಂತ ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ಹೊರಟಿದ್ದ, ಪ್ರತಿದಿನ ಸ್ನೇಹಿತರ ಜತೆ ಧನು ಪೂಜೆಗೆ ತೆರಳುತ್ತಿದ್ದ, ಇಂದು ಬಾರದೆ ಇರುವ ಕುರಿತು ಸ್ನೇಹಿತರು ಸುಮಂತ್ ಮನೆಯವರಿಗೆ ಕರೆ ಮಾಡಿದಾಗ, ಆತ ಮುಂಜಾನೆಯೇ ದೇವಸ್ಥಾನಕ್ಕೆ ಹೋಗಿದ್ದಾನೆ ಎಂದು ಮನೆಯವರು ತಿಳಿಸಿದ್ದಾರೆ. ಆದರೆ ಸುಮಂತ್ ದೇವಸ್ಥಾನಕ್ಕೆ ಬಂದಿಲ್ಲ ಎಂಬ ಮಾಹಿತಿ ತಿಳಿದ ಬಳಿಕ ಕುಟುಂಬಸ್ಥರು ಆತಂಕಗೊಂಡು ಸ್ಥಳೀಯರಿಗೆ ವಿಷಯ ತಿಳಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!