ಧರ್ಮಸ್ಥಳದಲ್ಲಿ ನಡೆದ 74 ಅಸಹಜ ಸಾವು ಪ್ರಕರಣಗಳನ್ನು ಎಸ್‌ಐಟಿ ತನಿಖೆಗೆ ಒತ್ತಾಯ
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡಕ್ಕೆ ಧರ್ಮಸ್ಥಳದಲ್ಲಿ1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಸಂಬಂಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಸೌಜನ್ಯ ತಾಯಿ ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳದಲ್ಲಿಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.
ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ್ ರಾವ್ ಅವರ ಪೀಠವು ಆಲಿಸಿದೆ. ನ್ಯಾಯಾಲಯದಲ್ಲಿ ಕುಸುಮಾವತಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್ ಬಾಲನ್, “ಧರ್ಮಸ್ಥಳದ ಪೋಲೀಸ್ ಠಾಣಾ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವುಗಳು ನಡೆದಿರುವುದಾಗಿ ವರದಿಯಾಗಿದೆ.




