ಸುಳ್ಯ: ರಸ್ತೆಯಲ್ಲಿ ಪಲ್ಟಿಯಾದ ಓಮ್ನಿ ಕಾರು: ಮಗು ಸೇರಿದಂತೆ ನಾಲ್ವರಿಗೆ ಗಾಯ
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ, ಮಗು ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಅರಂತೋಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಈ ಓಮ್ನಿ ಕಾರು ವಿರಾಜಪೇಟೆಯಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿತ್ತು. ದೇವರಕೊಲ್ಲಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಮೇಲೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.




