ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಬಂಟ್ವಾಳ ಸ್ಥಾಯಿ ಮಾಜಿ ಅಧ್ಯಕ್ಷ ಮಾಧವ ಮಾವೆ ನೇಮಕ
ವಿಟ್ಲ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾಗಿ ಬಂಟ್ವಾಳ ತಾಲೂಕು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಮಾಧವ ಮಾವರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ.
ಮಾಧವ ಮಾವೆರವರು ಬಂಟ್ವಾಳ ತಾಲೂಕು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಜಿಲ್ಲೆಯ ಕಾರ್ಯಕಾರಿಣಿ ವಿವಿಧ ಜವಾಬ್ದಾರಿಯ ಸಂಚಾಲಕರಾಗಿ, ಬೇರೆ ಬೇರೆ ಗ್ರಾಮಗಳ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ರಾಜಕೀಯ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿ ಪಕ್ಷ ಸಂಘಟನೆಯಲ್ಲಿ ಮುಂಚೂಣಿ ನಾಯಕರಾಗಿರುವ ಇವರು ರಾಜಕೀಯ ಮಾತ್ರವಲ್ಲದೆ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.




