ನಾಳೆಯಿಂದ ರಾಜ್ಯದಲ್ಲಿ ಆರೋಗ್ಯ ಕಾರ್ಯಕರ್ತರಿಂದ ಮನೆಮನೆಗೆ ತೆರಳಿ ಆರೋಗ್ಯ ಸರ್ವೆ:
ರಾಜ್ಯ ಆರೋಗ್ಯ ಇಲಾಖೆ ಆದೇಶ
ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಆರ್ಭಟ ಹಾಗೂ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ಆರೋಗ್ಯ ಕಾರ್ಯಕರ್ತರು ಮನೆ ಮನೆ ಸರ್ವೆ ನಡೆಸಿ, ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಕುರಿತಂತೆ ಸರ್ವೆ ನಡೆಸುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ 29-12-2021ರ ನಾಳೆಯಿಂದ 15-01-2022ರವರೆಗೆ ಒಂದು ಬಾರಿ ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಮನೆ ಮನೆ ಸಮೀಕ್ಷಾ ಕಾರ್ಯವನ್ನು ನಡೆಸುವಂತೆ ಆದೇಶಿಸಿದೆ.
ಇನ್ನೂ ಆರೋಗ್ಯ ಇಲಾಖೆಯಿಂದ ಐಎಲ್‌ಐ ಹಾಗೂ ಸಾರಿ ಪ್ರಕರಣ ಮನೆ ಮನೆ ಸಮೀಕ್ಷೆಗಾಗಿ ಉಪ ಕೇಂದ್ರ ಮಟ್ಟದಲ್ಲಿ IHIP ತಂತ್ರಾಂಶದ ಎಸ್-ಫಾರ್ಮ್ ನಮೂನೆಯಲ್ಲಿ ಸಲ್ಲಿಸಬೇಕೆಂದು ಸೂಚಿಸಿದೆ.