ಪುತ್ತೂರು: ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ವಿಚಾರಣೆಗೆ ಹೈಕೋರ್ಟ್ ತಡೆ
ಪುತ್ತೂರು: ಹತ್ಯೆಯಾಗಿದ್ದ ಸಂಘಪಾರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದಲ್ಲಿ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
2025ರ ಮೇ 1ರಂದು ಬಜ್ಜೆಯಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪುಳಿಮಜಲು ಸುಹಾಸ್ ಶೆಟ್ಟಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ಮೇ 12ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್‌ನಲ್ಲಿ ನಡೆದಿತ್ತು.ಈ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಗ್ರಾಮಾಂತರ ಠಾಣಾ ಪಿಎಸ್‌ಐ ಮಂಜುನಾಥ್ ಟಿ.ಅವರ ದೂರಿನ ಮೇರೆಗೆ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪೊಲೀಸರು ಕಲಂ 353(2)ಬಿಎನ್‌ಎಸ್ 2023ರಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.




