ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ: ಡಿಜಿಪಿ ರಾಮಚಂದ್ರ ರಾವ್ ಅಮಾನತು
ಬೆಂಗಳೂರು : ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾ*ಸಲೀ*ಲೆ ನಡೆಸಿರೋದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಮಚಂದ್ರ ರಾವ್ ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ(ಜ.19) ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಿರುವುದಾಗಿ ಸರ್ಕಾರ ಆದೇಶದಲ್ಲಿ ಉಲ್ಲೇಖಿಸಿದೆ.




