May 2, 2026

ಮಹಿಳೆಯರು, ಯುವತಿಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವ್ಯಕ್ತಿಯ ಬಂಧನ

0
image_editor_output_image1391979835-1768976319745.jpg

ಬೆಂಗಳೂರು: ಮಹಿಳೆಯರು ಮತ್ತು ಯುವತಿಯರ ಒಳ ಉಡುಪುಗಳನ್ನು ಕದ್ದು ವಿಲಕ್ಷಣವಾಗಿ ವರ್ತಿಸುತ್ತಿದ್ದ ‘ಸೈಕೋ’ ಕಳ್ಳ ಇದೀಗ ಬೆಂಗಳೂರಿನ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಕೇರಳ ಮೂಲದ ಅಮಲ್(23) ಬಂಧಿತ ಆರೋಪಿ.

ಕೇರಳ ಮೂಲದ 23 ವರ್ಷದ ಅಮಲ್, ಮನೆ ಮಹಡಿ, ಹಾಗೂ ಆಚೆ ಒಣಹಾಕಿರುವ ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ. ಹೊರಗಡೆ ಸುತ್ತಾಡಿ ಮನೆಗಳನ್ನು ದೂರದಿಂದಲೇ ಪರಿಶೀಲನೆ ಮಾಡುತ್ತಿದ್ದ. ನಂತರ ಯಾರು ಇಲ್ಲದ ವೇಳೆ ನುಗ್ಗಿ ಒಳ ಉಡುಪುಗಳನ್ನು ಕದ್ದೊಯ್ಯುತ್ತಿದ್ದ. ಬಳಿಕ ಅವುಗಳನ್ನು ತಾನು ಧರಿಸಿಕೊಂಡು ಫೋಟೋ ತೆಗೆದುಕೊಂಡು ವಿಕೃತ ಆನಂದ ಪಡುತ್ತಿದ್ದ.

ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ವಿಕೃತ ಕಾಮಿ ಅಮಲ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಕದ್ದ ಒಳ ಉಡುಪುಗಳನ್ನು ಧರಿಸಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿರುವುದು ಮೊಬೈಲ್ನಲ್ಲಿ ಪತ್ತೆಯಾಗಿವೆ. ಹಾಗೇ ಅಮಲ್ ವಾಸವಿದ್ದ ಮನೆಯಲ್ಲಿಯೂ ಸಹ ಮಹಿಳೆಯರ ಒಳ ಉಡುಪುಗಳನ್ನ ಸಂಗ್ರಹಿಸಿ ಇಟ್ಟುಕೊಂಡಿರುವುದು ಕಂಡುಬಂದಿದೆ. ಸದ್ಯ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ

Leave a Reply

Your email address will not be published. Required fields are marked *

error: Content is protected !!