May 3, 2026

ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಮೃತದೇಹ ಪತ್ತೆ

0
image_editor_output_image1284127912-1769000066169.jpg

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಕೊಲೆಯಾದ ಘಟನೆ ಧಾರವಾಡದಲ್ಲಿ ನಡೆದಿದೆ.

ಮೃತಳನ್ನು ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!