ಬೆಳ್ತಂಗಡಿ: ಹಣ ಪಡೆದು ಮೋಸ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬೆಳ್ತಂಗಡಿ: ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ.
ಹಾಸನ ಚನ್ನರಾಯಪಟ್ಟಣ ನಿವಾಸಿ, ಎಸ್.ಎನ್.ಚಂದ್ರೆಗೌಡ ಆರೋಪಿ. ಈ ವಿಷಯದ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ದಾಖಲಾದ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.




