ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ವ್ಯಕ್ತಿಯ ಬಂಧನ
ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ, ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ.
ಜ.17ರಂದು ಹಾಸನದ 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿದ್ದ ಬಾಲಕಿ ಗಾಬರಿಯಲ್ಲೇ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು. ಬಳಿಕ ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿನೋಡಿ ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.




