ಪುತ್ತೂರು: ಪ್ರಚೋದನಕಾರಿ ಭಾಷಣ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ: ಪೋಲಿಸ್ ಇಲಾಖೆಗೆ ಹೈಕೋರ್ಟ್ ಸೂಚನೆ
ಪುತ್ತೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪುತ್ತೂರಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಎಫ್ಐಆರ್ ವಿರುದ್ದ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸದ್ಯ ಯಾವುದೇ ರೀತಿ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೋಲಿಸ್ ಇಲಾಖೆಗೆ ಸೂಚನೆ ನೀಡಿದೆ.
ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಜನವರಿ 12ರಂದು ನಡೆದಿದ್ದ ವಿವೇಕ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪದಡಿಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.




