ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಎರಡೇ ತಿಂಗಳಲ್ಲಿ ಆತ್ಮಹತ್ಯೆ
ಕಲಬುರಗಿ: ಪ್ರೀತಿಸಿ ಮದುವೆಯಾದ ನವವಿವಾಹಿತೆ ಎರಡೇ ತಿಂಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಅನಸೂಯಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಕಲಬುರಗಿ ನಗರದ ಆಜಾದಪುರ್ ಬಡಾವಣೆಯ ನಿವಾಸಿಯಾಗಿದ್ದು, ಈಕೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಅತ್ತೆ ಮಗ ಅವಿನಾಶ್ ಜೊತೆ ಪ್ರೀತಿಸಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಾದ ಎರಡೇ ತಿಂಗಳಲ್ಲಿ ಈಕೆಗೆ ತನ್ನ ಮೂರು ಜನ ಸಹೋದರಿಯರು ಕ್ಯಾಪಿಟಲ್ ಸಿಟಿಗಳಲ್ಲಿ ವಾಸವಿದ್ರು, ತಾನು ಮಾತ್ರ ಹಳ್ಳಿಯಲ್ಲಿ ವಾಸ ಮಾಡುತ್ತಿರುವ ಮಾನಸಿಕ ಕೊರಗು ಕಾಡಲಾರಂಭಿಸಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ
ಮದುವೆಯ ಬಳಿಕ ತವರು ಮನೆಗೆ ಹೋದಾಗ ತನ್ನ ಪೋಷಕರ ಬಳಿ ಸಹ ಒಂದೆರಡು ಬಾರಿ, ಸಹೋದರಿಯರು ಬೆಂಗಳೂರು ಹಾಗೂ ಮುಂಬೈನಂತಹ ಕ್ಯಾಪಿಟಲ್ ಸಿಟಿಗಳಲ್ಲಿ ವಾಸಿಸುತ್ತಿದ್ದಾರೆ. ನಾನು ಮಾತ್ರ ಉತ್ತಮ ವಿದ್ಯಾಭ್ಯಾಸ ಪಡೆದರೂ ಹಳ್ಳಿಯಲ್ಲಿ ಜೀವನ ನಡೆಸುತ್ತಿರುವ ಕೊರಗನ್ನು ಹೇಳಿಕೊಂಡಿದ್ದಳು. ಈ ವೇಳೆ ಪೋಷಕರು ಬುದ್ದಿಮಾತು ಹೇಳಿ ಕಳುಹಿಸಿದ್ದಾರೆ. ಆದರೆ, ಅನಸೂಯಾಗೆ ಇದೇ ಮಾನಸಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.




