January 31, 2026

ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ: ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR

0
image_editor_output_image28760932-1769236546686.jpg

ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ.

ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಪವನ್ ತಂದೆ ಮಲ್ಲಪ್ಪ ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಮುಖ್ಯ ಶಿಕ್ಷಕ ಅಯ್ಯಪ್ಪ ಸೇರಿ 6 ಜನ ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!