January 31, 2026

ಹಿಂದೂ ಸಮಾಜೋತ್ಸ: ಶರಣ್ ಪಂಪ್‌ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧ

0
image_editor_output_image713475007-1769408611867.jpg

ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ರವಿವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್‌ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶಿಸಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿರುವ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಾಗಿವೆ.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದಶರಣ್ ಪಂಪ್‌ವೆಲ್‌ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!