January 31, 2026

ಬೆಳ್ತಂಗಡಿ: ಅರಣ್ಯ ಇಲಾಖೆ ಇರಿಸಿದ ಬೋನಿ ಬಿದ್ದ ಚಿರತೆ

0
image_editor_output_image-350558520-1769413324659.jpg

ಬೆಳ್ತಂಗಡಿ: ಸ್ಥಳೀಯರ ನಿದ್ದೆಗೆಡಿಸಿದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ ಬೋನಿ ಬಿದ್ದ ಘಟನೆ ನಡ ಕನ್ಯಾಡಿ ಪರಿಸರ ಪ್ರದೇಶದಲ್ಲಿ ನಡೆದಿದೆ.

ಈ ಪ್ರದೇಶದಲ್ಲಿ ಚಿರತೆಯ ಓಡಾಟ ತೀವ್ರವಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದಲ್ಲದೆ, ಹಲವು ಸಾಕು ಪ್ರಾಣಿಗಳ ಮೇಲೂ ದಾಳಿ ನಡೆಸಿದ್ದ ಘಟನೆಗಳು ವರದಿಯಾಗಿದ್ದವು. ಇದರಿಂದ ಸ್ಥಳೀಯರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿತ್ತು.

ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ, ಚಿರತೆ ಸಂಚರಿಸುತ್ತಿದ್ದ ಸ್ಥಳಗಳನ್ನು ಗುರುತಿಸಿ, ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿಶೇಷ ಬೋನುಗಳನ್ನು ಸ್ಥಾಪಿಸಿತ್ತು. ಇದರ ಫಲವಾಗಿ ಇದೀಗ ಒಂದು ಚಿರತೆ ಬೋನಿಗೆ ಸಿಲುಕಿದೆ.

ಕೊನೆಗೂ ಬೋನು ಸ್ಥಾಪಿಸಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!