January 31, 2026

ವಿಮಾನ ಲ್ಯಾಂಡಿಂಗ್ ವೇಳೆ ವಿಮಾನ ಪತನ: ಡಿಸಿಎಂ ಅಜಿತ್ ಪವಾರ್ ಸೇರಿ 6 ಜನರು ಸಾವು

0
image_editor_output_image-1599124611-1769576500362.jpg

ಪುಣೆ: ಬಾರಾಮತಿಯಲ್ಲಿ ಡಿಸಿಎಂ ಅಜಿತ್ ಪವಾರ್ ಅವರ ಚಾರ್ಟೆಡ್ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ.

ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ.

ಅಜಿತ್ ಪವಾರ್ ಅವರೊಂದಿಗೆ ಅವರ ಭದ್ರತಾ ಸಿಬ್ಬಂದಿ ವಿಮಾನದಲ್ಲಿ ಇದ್ದರು ಎಂದು ಮೂಲಗಳು ದೃಢಪಡಿಸಿವೆ.

ಬಾರಾಮತಿಯಲ್ಲಿ ಇಂದು ನಿಗದಿಯಾಗಿದ್ದ ರ್ಯಾಲಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪಾಲ್ಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಭೀಕರ ಅವಘಡ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!