ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಟ್ಲದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿಟ್ಲ ಜಮಾಅತ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಅಝೀಝ್ ಸನ ಧ್ವಜಾರೋಹಣ ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನಾಝಿರ್ ಮುಡಿಪು ಸ್ವಾಗತಿಸಿದರು. ಪ್ರ. ಕಾರ್ಯದರ್ಶಿಗಳಾದ ಅಬೂಬಕರ್ ನೋಟರಿ ವಿಟ್ಲ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಝುಬೇರ್ ವಿಟ್ಲ ಗಣರಾಜ್ಯ ಮತ್ತು ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು. ಟ್ರಸ್ಟ್ ಸದಸ್ಯರಾದ ಇಕ್ಬಾಲ್ ಶೀತಲ್ ಮಸೀದಿ ಕೋಶಾಧಿಕಾರಿ ಶರೀಫ್ ಪೊನ್ನೊಟ್ಟು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕಿ ಫರ್ಝಾನ ಎಚ್ ಕಾರ್ಯಕ್ರಮ ನಿರೂಪಿಸಿದರು.





