March 18, 2026

ಚಿಕ್ಕಮಗಳೂರು: ವಾಹನ ಢಿಕ್ಕಿಯಾಗಿ ಯುವತಿ ಸಾವು

0
image_editor_output_image111654567-1769601140476.jpg

ಚಿಕ್ಕಮಗಳೂರು: ಆಲ್ದೂರು ಬಳಿ ಪ್ರವಾಸಿ ವಾಹನ ಡಿಕ್ಕಿಯಾಗಿ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಮೃತರನ್ನು ನವಮಿ (26) ಎಂದು ಗುರುತಿಸಲಾಗಿದೆ. ಇವರು ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು.

ಅಪಘಾತ ಎಸಗಿದ ವಾಹನ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!