ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಆಶ್ರಮದಲ್ಲಿ ನಿಗೂಢ ಸಾವು
ಜೈಪುರ: ರಾಜಸ್ಥಾನದ ಜೈಪುರದಲ್ಲಿ 25 ವರ್ಷದ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಅವರು ತಮ್ಮ ಆಶ್ರಮದಲ್ಲಿ ಕುಸಿದು ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಸಾಧ್ವಿ ಅವರು ಜ್ವರದಿಂದ ಬಳಲುತ್ತಿದ್ದರು ಮತ್ತು ಕಾಂಪೌಂಡರ್ ನೀಡಿದ ಇಂಜೆಕ್ಷನ್ ನಂತರ ಕುಸಿದು ಬಿದ್ದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಆತ್ಮಹತ್ಯೆಯ ಪತ್ರದಂತಹ ಪೋಸ್ಟ್ ಕಾಣಿಸಿಕೊಂಡಿದೆ.
25 ವರ್ಷ ಪ್ರಾಯದ ಸಾಧ್ವಿ ಪ್ರೇಮ್ ಬೈಸಾ ಜ್ವರದಿಂದ ಬಳಲುತ್ತಿದ್ದರು, ಈ ನಡುವೆ ಆಶ್ರಮದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು, ಆದರೆ ಅಷ್ಟರಲ್ಲೇ ಅವರು ಸಾವನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಸಾಧ್ವಿಯ ಮರಣದ ಹಲವು ಗಂಟೆಗಳ ನಂತರ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದು ಕಾಣಿಸಿಕೊಂಡಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದೆ.




