ಕಾಪು: ಕಾಂಗ್ರೆಸ್ ಮುಖಂಡ ದಿವಾಕರ ಶೆಟ್ಟಿ ಮನೆಯಲ್ಲಿ ಕಳ್ಳತನ
ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ ಅವರ ಮನೆಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗದನ್ನು ದೋಚಿದ್ದಾರೆ.
ದಿವಾಕರ್ ಶೆಟ್ಟಿ ಮುಂಬೈನಲ್ಲಿ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಮತ್ತು ಅವರ ಮನೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಪುರಸಭೆ ಸದಸ್ಯ ಸುರೇಶ್ ಶೇರಿಗಾರ್ ಅವರಿಗೆ ವಹಿಸಿದ್ದರು. ಸುರೇಶ್ ಶೇರಿಗಾರ್ ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದಾಗ ಈ ಕಳ್ಳತನ ನಡೆದಿದೆ. ಮುಸುಕು ಧರಿಸಿದ ದುಷ್ಕರ್ಮಿಗಳು ಬಾಗಿಲು ಒಡೆದು ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ.




