ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಮುಕ್ತ ಸಂವಾದ ಕಾರ್ಯಕ್ರಮ.
ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಮುಕ್ತ ಸಂವಾದ ಕಾರ್ಯಕ್ರಮ.
ಪೂರ್ವ ಪ್ರಾಥಮಿಕ ತರಗತಿಗಳಿಂದ ಹಿಡಿದು 9ನೇ ತರಗತಿವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಅಭಿವೃದ್ಧಿಯ ಬಗ್ಗೆ ಪೋಷಕರ ಮುಕ್ತ ಸಂವಾದ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು.


ಈ ಸಂವಾದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜೇಸಿ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರಾದ ರಾಧಾಕೃಷ್ಣ ಪೈ, ಕಾರ್ಯದರ್ಶಿಗಳಾದ ರಾಘವೇಂದ್ರ ಪೈ, ಹಿರಿಯ ನಿರ್ದೇಶಕರಾದ ವಿ.ಮೋನಪ್ಪ ಶೆಟ್ಟಿ, ನಿರ್ದೇಶಕರಾದ ಜೇಸಿ ವಿಜಯ್ ಪಾಯಸ್ , ಆಡಳಿತ ಅಧಿಕಾರಿಗಳಾದ ರಾಧಾಕೃಷ್ಣ ಎರುಂಬು, ಪ್ರಾಂಶುಪಾಲರಾದ ಜಯರಾಮ ರೈ , ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಎಲ್ಲಾ ಶಿಕ್ಷಕ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೋಷಕರು ಆಯಾ ತರಗತಿ ಶಿಕ್ಷಕರ ಜೊತೆ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ಪಡೆದುಕೊಂಡರು.




