February 1, 2026

40 ಸಾವಿರ ರೂ.ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್‌ಐ ಚೇತನ್

0
image_editor_output_image49121224-1769936093399.jpg

ತುಮಕೂರು: ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್‌ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ಮೂಲದ ವಕೀಲರ ವಾಹನ ಇದಾಗಿದ್ದು, ವಾಹನ ಬಿಡುಗಡೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿನ್ನೆ ರಾತ್ರಿ 11:30 ರ ಸುಮಾರಿಗೆ ಕ್ಯಾತಸಂದ್ರ ಬಳಿಯ ನಮಸ್ತೆ ತುಮಕೂರು ಹೋಟೆಲ್‌ನಲ್ಲಿ 40 ಸಾವಿರ ರೂ. ಲಂಚ ಪಡದುಕೊಳ್ಳುತ್ತಿದ್ದಾಗ ಪಿಎಸ್‌ಐ ಚೇತನ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು, ಪಿಎಸ್‌ಐಯನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!