February 2, 2026

ಅಡುಗೆ ಮಾಡುವಾಗ ಅನಿಲ ಸೋರಿಕೆ: ಒಂದೇ ಕುಟುಂಬದ ಮೂವರು ಸಾವು

0
image_editor_output_image891262609-1770020073276.jpg

ರಾಮನಗರ: ಕನಕಪುರದಲ್ಲಿ ಅಡುಗೆ ಮಾಡುವಾಗ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತರನ್ನು ಸಿದ್ದರಾಜು (55), ಚಂದ್ರಮ್ಮ (50), ಪ್ರಶಾಂತ್ (22) ಎಂದು ಗುರುತಿಸಲಾಗಿದೆ. ಕನಕಪುರ ನಗರದ ಅಮರನಾರಾಯಣ ಬ್ಲಾಕ್‍ನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಗ್ಯಾಸ್ ಸೋರಿಕೆಯಾಗಿ ಈ ಅಗ್ನಿ ಅವಘಡ ಸಂಭವಿಸಿತ್ತು.

ಗಾಯಾಳುಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮೂವರೂ ಸಾವನ್ನಪ್ಪಿದ್ದಾರೆ.

ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ. ಮೃತಪಟ್ಟ ತಂದೆ, ತಾಯಿ ಹಾಗೂ ಮಗನನ್ನು ನೆನೆದು ಸಂಬಂಧಿಕರು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!