February 3, 2026

ಸಕ್ರೆಬೈಲು: ಕಾರು, ಬಸ್ಸು ನಡುವೆ ರಸ್ತೆ ಅಪಘಾತ: ಓರ್ವ ಮೃತ್ಯು, ಮತ್ತೊರ್ವ ಗಂಭೀರ

0
image_editor_output_image1645940939-1770076365598.jpg

ತೀರ್ಥಹಳ್ಳಿ: ಕಾರು ಬಸ್ಸು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ.

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಆಲ್ಟ ಕಾರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಸ್ಸಿನ ಮುಂಭಾಗ ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರು ಬಲ ಭಾಗಕ್ಕೆ ಹೋಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!