February 3, 2026

ಮಂಗಳೂರು: ಕಸಬಾ ಬೆಂಗ್ರೆ ನಿವಾಸಿ ಸಫ್ಘಾನ್ ನಾಪತ್ತೆ

0
image_editor_output_image1781732226-1770076625928.jpg

ಮಂಗಳೂರು: ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಸಫ್ಘಾನ್ (28) ಎಂಬವರು ಜ.28ರಂದು ರಾತ್ರಿ 9 ಗಂಟೆ ವೇಳೆಗೆ ಮನೆಯಿಂದ ಹೊರಗೆ ಹೋದವರು ಆ ಬಳಿಕ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ.

ಮನೆಯವರು ಎಲ್ಲ ಕಡೆ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗಿಲ್ಲ. ಈ ಬಗ್ಗೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಚಹರೆ: 5.6 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆ ಕಪ್ಪು ಮೈಬಣ್ಣ, ಮನೆಯಿಂದ ತೆರಳಯವಾಗ ಬಿಳಿ ಬಣ್ಣದ ಟಿ-ಶರ್ಟ್ ಮತ್ತು ನೀಡಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.

ತುಳು, ಬ್ಯಾರಿ, ಕನ್ನಡ, ತಮಿಳು ಭಾಷೆ ಬಲ್ಲವರಾಗಿದ್ದಾರೆ. ಈ ಚಹರೆಯ ವ್ಯಕ್ತಿ ಪತ್ತೆಯಾದಲ್ಲಿ ಪಣಂಬೂರು ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!