ಮಂಜೇಶ್ವರ: ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹ: ಮಾರಣಾಂತಿಕವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತ್ಯು
ಮಂಜೇಶ್ವರ: ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ.
ಮಾರಣಾಂತಿಕವಾಗಿ ಇರಿತಕ್ಕೆ ಒಳಗಾಗಿದ್ದ ಶೇಕುಂಞ ಎಂಬವರು ಇಂದು(ಫೆ.3) ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಪತ್ನಿಯ ಅಕ್ಕನ ಮಗಳು ಜುಮೈಲಾ(17) ಸೋಮವಾರ ಸಂಜೆ ಕೊಲೆಯಾಗಿದ್ದರು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದಾನೆ.




