February 4, 2026

ಕುಂದಾಪುರ: ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

0
image_editor_output_image-626250490-1770194159870

ಕುಂದಾಪುರ:  ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯ ಚಿನ್ನದ ಅಂಗಡಿಯೊಂದರಲ್ಲಿ ಸುಮಾರು ಒಂದು ವಾರದ ಹಿಂದೆ ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗ ಕಜೆಕಾರು ಗ್ರಾಮದ ನಿವಾಸಿ ರಮೇಶ್ (೪೨) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಸುಮಾರು 1.25 ಲಕ್ಷ ರೂಪಾಯಿ ಮೌಲ್ಯದ 9 ಗ್ರಾಂ ತೂಕದ ಚಿನ್ನದ ಸರ ಮತ್ತು 33,000 ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಯು ಚಿನ್ನ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಭೇಟಿ ನೀಡಿದ್ದನು. ಸಿಬ್ಬಂದಿಯ ಬಳಿ ಚಿನ್ನದ ಸರಗಳನ್ನು ತೋರಿಸುವಂತೆ ಕೇಳಿದ್ದ ಆತ, ಎಲ್ಲರೂ ಕಾರ್ಯನಿರತರಾಗಿದ್ದ ಸಂದರ್ಭವನ್ನು ಬಳಸಿಕೊಂಡು 9 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಯರಾಮ್ ಡಿ. ಗೌಡ ಅವರ ನೇತೃತ್ವದ ತಂಡವು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ಕಾರ್ಯಾಚರಣೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ನಂಜಾನಾಯ್ಕ್ ಎನ್., ತನಿಖಾ ವಿಭಾಗದ ಪಿಎಸ್‌ಐ ಪುಷ್ಪಾ ಹಾಗೂ ಸಿಬ್ಬಂದಿಗಳಾದ ಸಂತೋಷ್, ಮಹಾಬಲ ಶೆಟ್ಟಿಗಾರ್, ಪ್ರೀನ್ಸ್, ಘನಶ್ಯಾಮ್, ಸಂತೋಷ್ ದೇವಾಡಿಗ, ಗೌತಮ್, ಲೋಹಿತ್, ಚಂದ್ರಶೆಟ್ಟಿ ಮತ್ತು ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!