ಪುತ್ತೂರು: BJP ಮುಖಂಡನ ಲವ್ ಸೆಕ್ಸ್ ಧೋಖಾ ಪ್ರಕರಣ: ಪ್ರತಿಭಾ ಕುಳಾಯಿ ವಿರುದ್ಧ ನೋಟಿಸ್ ಜಾರಿಗೊಳಿಸಿದ ಪೊಲೀಸರು
ಮಂಗಳೂರು: ಪುತ್ತೂರಿನ ಲವ್ ಸೆಕ್ಸ್ ಧೋಖಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಶ್ರೀಕೃಷ್ಣ ರಾವ್ ನಿಂದ ವಂಚನೆಗೆ ಒಳಗಾಗಿರುವ ಯುವತಿಗೆ ನ್ಯಾಯ ಕೊಡಿಸಲು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಗೆ ಪುತ್ತೂರು ನಗರ ಠಾಣೆಯ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಆರೋಪಿ ಶ್ರೀಕೃಷ್ಣ ರಾವ್ ಎಂಬಾತನ ತಂದೆ ಪಿ.ಜಿ. ಜಗನ್ನಿವಾಸ ರಾವ್ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಡಿದ ದೂರಿನ ಮೇರೆಗೆ, ಅರ್ಜಿಯನ್ನು ಅಧೀಕ್ಷರು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಹೀಗಾಗಿ, ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.




