ಕೇರಳ ಮೂಲದ ಬಸ್ ಪಲ್ಟಿ: ಶಿಕ್ಷಕಿ ಸೇರಿದಂತೆ ಹಲವು ವಿದ್ಯಾರ್ಥಿಗಳಿಗೆ ಗಾಯ
ವಿಜಯನಗರ: ಬಸ್ ನಲ್ಲಿ ಪ್ರವಾಸಕ್ಕೆಂದು ಬಂದು ಕೇರಳ ಮೂಲದ ವಿದ್ಯಾರ್ಥಿಗಳ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಎಂಬಲ್ಲಿ ಫೆಬ್ರವರಿ 4 ರಂದು ಪಲ್ಟಿಯಾಗಿದೆ.
ಹಂಪಿಗೆ ತೆರಳುತ್ತಿದ್ದ ವೇಳೆ ಕೂಡ್ಲಿಗಿ ತಾಲೂಕಿನ ಅಮ್ಮನ ಕೇರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಶಿಕ್ಷಕಿ ಸೇರಿದಂತೆ ಹಲವರಿಗೆ ಗಾಯಾಗಳಾಗಿದ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.




