February 8, 2026

ಪುತ್ತೂರು: ಕಾಂಗ್ರೇಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ನಾಯಕರ ಹೆಸರಿಲ್ಲ: ಸಾಮಾಜಿಕ ಜಾಲತಾಣದಲ್ಲಿ ಸ್ಥಳೀಯ ಮುಸ್ಲಿಂ ಮುಖಂಡರ ಆಕ್ರೋಶ

0
image_editor_output_image-1975717726-1770369348950.jpg

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಕಾಂಗ್ರೇಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ನಾಯಕರು ಕೈಬಿಟ್ಟಿದ್ದು, ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣ ಸೇರಿದಂತೆ ವಿವಿದೆಡೆ ಸ್ಥಳೀಯ ಮುಸ್ಲಿಂ ಮುಖಂಡರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮುತುವರ್ಜಿಯಲ್ಲಿ ನಿರ್ಮಾಣವಾಗ್ತಿರೋ ನೂತನ ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಸ್ಲಿಂ ನಾಯಕರ ಹೆಸರುಗಳನ್ನು ಕೈ ಬಿಡಲಾಗಿದೆ. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಮುಸ್ಲಿಂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಮಾಧಾನದ ಬೆನ್ನಲ್ಲೇ ತೇಪೆ ಹಚ್ಚಲು ಜಿಲ್ಲಾ ಕಾಂಗ್ರೆಸ್ ಯತ್ನಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಹೆಸರು ಹಾಕಿ ಮರುಮುದ್ರಣ ಮಾಡಿದೆ. ಆದರೆ ಮತ್ತೆ ಪುತ್ತೂರು ಹಾಗೂ ದ.ಕ‌ ಜಿಲ್ಲೆಯ ಹಲವು ಮುಸ್ಲಿಂ ನಾಯಕರ ಕಡೆಗಣನೆ ಮಾಡಲಾಗಿದೆ ಎಂದು ಕಾರ್ಯಕರ್ತರು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ದವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್‌ ಆಲಿ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ನವಾಝ್‌, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್‌.ಮಹಮ್ಮದ್‌, ನಿಗಮದ ಅಧ್ಯಕ್ಷ ಗಫೂರ್, ಟಿ.ಎಂ.ಶಹೀದ್‌ ಹೆಸರು ಹಾಕದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!