February 9, 2026

ಆಮ್ ಆದ್ಮಿ ಪಕ್ಷದ ನಾಯಕನ ಗುಂಡಿಟ್ಟು ಹತ್ಯೆ

0
image_editor_output_image1029423658-1770369795561.jpg

ಚಂಡೀಗಢ: ಪಂಜಾಬ್‌ನ ಜಲಂಧರ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ

ಒಬೆರಾಯ್ ಗುರುದ್ವಾರದ ಹೊರಗೆ ತಮ್ಮ ಕಾರನ್ನು ನಿಲ್ಲಿಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ದಾಳಿಕೋರರು ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಕಾರಿನಲ್ಲಿದ್ದಾಗ ಐದು ಗುಂಡುಗಳು ಅವರ ದೇಹವನ್ನು ಹೊಕ್ಕಿದ್ದವು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು.

ಲಕ್ಕಿ ಒಬೆರಾಯ್ ಅವರ ಪತ್ನಿ ಈ ಹಿಂದೆ ಎಎಪಿ ಅಭ್ಯರ್ಥಿಯಾಗಿ ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

Leave a Reply

Your email address will not be published. Required fields are marked *

error: Content is protected !!