February 8, 2026

ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ

0
image_editor_output_image-1827860414-1770370218862.jpg

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ ಅವರಿಗೆ ಸಾಲ ನೀಡಿದ್ದ ಉದ್ಯಮಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಯಶಸ್ವಿನಿ ಗೌಡಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6: 30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು.

ಈ ಪ್ರಕರಣದಲ್ಲಿ ಬೇಕರಿ ರಘು, ರಾಜೇಶ್, ವೆಂಕಟೇಶ್ ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿತ್ತು. ಮಂಡ್ಯದಲ್ಲಿ ಬೇಕರಿ ರಘು ಅರೆಸ್ಟ್ ಮಾಡುವ ವೇಳೆ ಪೊಲೀಸರಿಗೆ ಯಶಸ್ವಿನಿ ಅಡ್ಡಿಪಡಿಸಿದ್ದಳು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಎಫ್‌ಐಆರ್‌ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಮಾಜಿ ರೌಡಿಶೀಟರ್ ಯಶಸ್ವಿನಿ ಪಾತ್ರವಿರುವುದು ಕಂಡಬಂದಿತ್ತು. ಪುಟ್ಟೇನಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಯಶಸ್ವಿನಿಯನ್ನು ಕೋಕಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!