July 2, 2026

ವಿಟ್ಲ ಮುಡ್ನೂರು ಗ್ರಾ.ಪಂ ಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ

0
IMG-20260207-WA0149

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY), 15 ನೇ ಹಣಕಾಸು ಆಯೋಗದ ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್ ನಿವಾಸ್ ಯೋಜನೆಯ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಲಾಯಿತು.

ಗ್ರಾಮೀಣ ಭಾಗದಲ್ಲಿ ನಿವೇಶನದ ವಿನ್ಯಾಸ ಅನುಮೋದನೆ, ನಮೂನೆ 11ಎ, 11-B,‌ ಸ್ವಾಧೀನ ಪ್ರಮಾಣ ಪತ್ರ, ಕದ ನಂಬ್ರ
ಪಡೆಯಲು ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ಆಡಳಿತ ಮಂಡಳಿಯ ಸದಸ್ಯರು ತಿಳಿಸಿ ಸದರಿ ಸಮಸ್ಯೆಯನ್ನು ಸರಿಪಡಿಸುವಂತೆ ಶಾಸಕರಿಗೆ ತಿಳಿಸಿದರು.

ಕಟ್ಟಡ ಮತ್ತು ಭೂ ತೆರಿಗೆ ಸಂಗ್ರಹಣೆ, ವಾರ್ಡ್ ಮತ್ತು ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಬೇಡಿಕೆಯ ಬಗ್ಗೆ ಮಾಹಿತಿ ಪಡೆದು ಕೊಳ್ಳಲಾಯಿತು.

ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ತಮ್ಮ ಸೇವಾ ಅವಧಿಯಲ್ಲಿನ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮದ ನಾಗರಿಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!