ನೇರಳಕಟ್ಟೆ: ಗ್ರಿಲ್ ಮಾಸ್ ಗೆ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ
ವಿಟ್ಲ: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹನೀಫ್ ಪೆರ್ಲಾಪು ಅವರ ಮಾಲೀಕತ್ವದಲ್ಲಿ ನೆಟ್ಟಮುಡ್ನೂರು ಗ್ರಾಮದ ನೇರಳಕಟ್ಟೆಯಲ್ಲಿ ಇತ್ತೀಚೆಗೆ ಶುಭಾರಂಭಗೊಂಡ ಹೋಟೆಲ್ ಗ್ರಿಲ್ ಮಾಸ್ ಗೆ ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಭೇಟಿ ನೀಡಿದರು.


ಗ್ರಿಲ್ ಮಾಸ್ ಸಂಸ್ಥೆಯ ಹನೀಫ್ ಪೆರ್ಲಾಪು ಅವರಿಂದ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನ ಸ್ವೀಕರಿಸಿದ ಅವರು ಹೋಟೆಲ್ ಉದ್ಯಮ ಯಶಸ್ವಿಯಾಗಲಿ ಎಂದು ಹಾರೈಸಿದರು ಮತ್ತು ಈ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಮುಂಬರುವ ಚುನಾವಣೆಗೆ ಸನ್ನದ್ಧರಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಳಾದ ಎಂ ಎಸ್ ಮಹಮ್ಮದ್, ಇನಾಯತ್ ಅಲಿ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಲತೀಫ್, ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.




