July 2, 2026

ಕೊಡಗು: SDPI ರಾಜ್ಯಾಧ್ಯಕ್ಷ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಅಬ್ದುಲ್ ಮಜೀದ್, ಕಾರು ಚಾಲಕ ಪ್ರಾಣಾಪಾಯದಿಂದ ಪಾರು

0
image_editor_output_image-1045436961-1770541083589.jpg

ಕೊಡಗು: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಹೆಚ್ಚಿನ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!