March 22, 2026

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

0
parking-lot-accidents-what-happens-if-your-insurance-lapses-and-you-have-an-accident-

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ದೇರಳಕಟ್ಟೆ ಬದ್ಯಾರು ನಿವಾಸಿ ಇಸ್ಮಾಯಿಲ್ ಇಬ್ರಾಹಿಂ(55) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
 
ಡಿ. 26 ರಂದು ಇಬ್ರಾಹಿಂ ಅವರು ದೇರಳಕಟ್ಟೆಯಿಂದ ಕೆ.ಸಿ. ರೋಡ್ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದರು.

Leave a Reply

Your email address will not be published. Required fields are marked *

error: Content is protected !!