July 2, 2026

ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ:ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ

0
image_editor_output_image-1931063570-1770642617630

ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ.  ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನೆಯ ಸಭೆ ನಡೆಯಿತು.

ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು.

ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್‌ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!