February 11, 2026

ಉಡುಪಿ: ಪೇಟೆಗೆ ತೆರಳಿದ್ದ ಮಹಿಳೆ ನಾಪತ್ತೆ

0
image_editor_output_image-969188310-1770750788686.jpg

ಉಡುಪಿ: ಬೈಂದೂರು ತಾಲೂಕು ಕಿರಿಮಂಜೇಶ್ವರ ದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!