ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: ಏಳು ಮಂದಿ ಸ್ಥಳದಲ್ಲೇ ಮೃತ್ಯು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದಾರೆ.
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅತಿ ವೇಗವೇ ಅಪಘಾತಕ್ಕೆ ಕಾರಣ
ಮೊದಲು ದ್ವಿಚಕ್ರ ವಾಹನ ಮತ್ತು ಕ್ಯಾಂಟರ್ ನಡುವೆ ಅಪಘಾತ ವಾಗಿದ್ದು, ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಐಜಿ ಲಾಭೂ ರಾಮ್ ಅವರು ಅಪಘಾತ ಸಂಬಂಧ ಮಾಹಿತಿ ನೀಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ನಡೆದಿದೆ. ಮೊದಲು ಟ್ಯಾಕ್ಸಿ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಆಗ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ.ಈಗಾಗಲೇ ಮೂರು ಜನರ ಮಾಹಿತಿ ಕಲೆ ಹಾಕಿದ್ದೇವೆ. ಉಳಿದವರ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ತನಿಖೆ ಮುಂದುವರಿದಿದೆ ಎಂದಿದ್ದಾರೆ.
ಹೊಸಕೋಟೆ ತಾಲ್ಲೂಕಿನ ಎಂ.ಸತ್ಯಾವರ ಬಳಿ ನಡೆದಿದ್ದ ಅಪಘಾತದಲ್ಲಿ ಮೃತ ಬೈಕ್ ಸವಾರ ದೇವನಹಳ್ಳಿ ಮೂಲದ ಗಗನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಆರು ಜನರ ಪೈಕಿ ಪೊಲೀಸರು ಇಬ್ಬರ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಅಶ್ವಿನ್, ಕರಣ್ ಆಲಿ ಕಾರಿನಲ್ಲಿದ್ದ ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಉಳಿದ ಮೃತರ ಮಾಹಿತಿಯನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.
ಸ್ಥಳಕ್ಕೆ ಭೇಟಿ ಸೋಕೋ ಟೀಮ್ ಭೇಟಿ ನೀಡಿದ್ದು, ಘಟನೆಯ ಕುರಿತು ಎಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಮಾಹಿತಿ ಕಲೆ ಹಾಕುತ್ತಿದೆ




