February 14, 2026

ಮಂಗಳೂರು: ವಿದ್ಯಾರ್ಥಿಗಳಿಗೆ MDMA ಡ್ರಗ್ಸ್ ಮಾರಾಟ: ಮೂವರು ಆರೋಪಿಗಳ ಬಂಧನ

0
image_editor_output_image338136240-1770985476356.jpg

ಮಂಗಳೂರು: ಬೆಂಗಳೂರಿನಿಂದ ಮಾದಕ ವಸ್ತುಗಳನ್ನು ತಂದು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

ಬಂಧಿತರನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28), ಮತ್ತು ಮೊಹಮ್ಮದ್ ಶಿಫಾನ್ (28) ಎಂದು ಗುರುತಿಸಲಾಗಿದ್ದು, ಇವರಿಂದ ಬರೋಬ್ಬರಿ ₹11.90 ಲಕ್ಷ ಮೌಲ್ಯದ 118.13 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ತಲಪಾಡಿ ಪರಿಸರದಲ್ಲಿ ಬೂದು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಮಿಂಚಿನ ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಡ್ರಗ್ಸ್ ಜೊತೆಗೆ ಕೃತ್ಯಕ್ಕೆ ಬಳಸಿದ ಕಾರು ಮತ್ತು 4 ಮೊಬೈಲ್ ಫೋನ್‌ಗಳನ್ನು ಒಳಗೊಂಡಂತೆ ಒಟ್ಟು ₹17.95 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೂ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ದನ ಕಳ್ಳತನ ಹಾಗೂ ಮೈಯದ್ದಿ ಮೇಲೆ ಹಲ್ಲೆ ಪ್ರಕರಣಗಳು ದಾಖಲಾಗಿದ್ದವು. ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದೆ.

Leave a Reply

Your email address will not be published. Required fields are marked *

error: Content is protected !!